ಸಿದ್ದಾಪುರ ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿಯವರು 10-01-2022ರ ಸೋಮವಾರದಂದು ಉದ್ಘಾಟಿಸಿದರು.
2019-20ನೇ ಸಾಲಿನಲ್ಲಿ ಮಳೆ ಹಾನಿಯಿಂದಾಗಿ ನಬಾರ್ಡ್ ಸಹಯೋಗದಡಿ RIDF-25 ಯೋಜನೆಯಡಿ 11 ಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಕೊಠಡಿ ನಿರ್ಮಾಣ ಮಾಡಲಾಗಿತ್ತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು ಹುಲ್ಕುತ್ರಿ ಶಾಲೆಯ ವಿಶೇಷತೆ, ಈ ಶಾಲೆಯ ಅಂತರ್ಜಾಲದ ಕುರಿತು ಮುಕ್ತ ಕಂಠದಿಂದ ಶ್ಲಾಘಿಸಿದರು. ಅಲ್ಲದೇ ಸಿದ್ದಾಪುರದಲ್ಲಿ ಆದಂತಹ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ ಸೋವಿನಕೊಪ್ಪ ಅಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು, ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಉಪಸ್ಥಿತರಿದ್ದರು.