76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಮ್ಮ ಶಾಲೆಯಲ್ಲಿ ಎಸ್.ಡಿ.ಎಮ್.ಸಿ. ಸಮಿತಿ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ದಿನ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ಸುರೇಶ ಬಂಗಾರ್ಯ ಗೌಡ ಇವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿದರು.
ನಂತರ ವಿವಿಧ ಘೋಷಣೆ ಹಾಗೂ ದೇಶಭಕ್ತಿಗೀತೆಗಳೊಂದಿಗೆ ಹುಲ್ಕುತ್ರಿಯವರೆಗೆ ಜಾಥಾ ಹೊರಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಷಣ, ದೇಶಭಕ್ತಿಗೀತೆಗಳನ್ನು ಹಾಡುವುದರ ಮೂಲಕ ತಮ್ಮ ದೇಶಪ್ರೇಮವನ್ನು ಪ್ರಕಟಪಡಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ಸುರೇಶ ಬಂಗಾರ್ಯ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಮಹಾಲಕ್ಷ್ಮಿ ಮಂಜುನಾಥ ಗೌಡ, ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶ್ರೀಮತಿ ರಾಧಾ ವೆಂಕಟ್ರಮಣ ಗೌಡ, ಎಸ್.ಡಿ.ಎಮ್.ಸಿ. ಸದಸ್ಯರಾದ ಶ್ರೀ ವೆಂಕಟೇಶ ಭಟ್, ಶ್ರೀ ದಿನೇಶ ಹೆಗಡೆ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ ಪದ್ಮನಾಭ ಗೌಡ, ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಮಾಬ್ಲ ಗೌಡ ಹಾಗೂ ಶಾಲಾ ಮುಖ್ಯ ಶಿಕ್ಷಕ ದರ್ಶನ ಹರಿಕಾಂತ ಉಪಸ್ಥಿತರಿದ್ದರು. ಕು. ಮೈತ್ರಿ ಹೆಗಡೆ ನಿರೂಪಿಸಿದರು ಹಾಗೂ ಕು. ರಂಜನಾ ಭಂಡಾರಿ ವಂದಿಸಿದರು.