ಕಳೆದ 21 ವರ್ಷಗಳಿಂದ ಹುಲ್ಕುತ್ರಿ ಶಾಲೆಯಲ್ಲಿ ಸೇವೆಸಲ್ಲಿಸುತ್ತಿರುವ ಶಿಕ್ಷಕ ದರ್ಶನ ಹರಿಕಾಂತರವರು 202-25ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಯಾವುದೇ ಅರ್ಜಿಯನ್ನು ನೀಡದೇ ಇಲಾಖೆಯ ಹಿರಿಯ ಅಧಿಕಾರಿಗಳೇ ಆಯ್ಕೆ ಮಾಡುವುದರ ಮೂಲಕ ಇತಿಹಾಸ ಸೃಷ್ಠಿಸಿದ್ದಾರೆ.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ದರ್ಶನ ಹರಿಕಾಂತರಿಗೆ ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿ, ಪಾಲಕ-ಪೋಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಾವಿನಬೀಳು ಗ್ರಾಮಸ್ಥರು ಅಭಿನಂದಿಸಿದ್ದಾರೆ.