ಕರೊನಾ ಹಿನ್ನೆಲೆಯಲ್ಲಿ ಇಲಾಖೆಯ ನಿರ್ದೇಶನದಂತೆ 72ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಮಾಬ್ಲ ಗೌಡ ಇವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಎಸ್.ಡಿ.ಎಮ್.ಸಿ. ಸದಸ್ಯರುಗಳು, ಶಿಕ್ಷಕವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಊರನಾಗರಿಕರು ಹಾಜರಿದ್ದರು.