15 ಅಗಸ್ಟ್ 2021 ರಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಮಾಬ್ಲ ಗೌಡ ಇವರು ಧ್ವಜಾರೋಹಣವನ್ನು ನೆರವೇರಿಸಿದರು.

ಧ್ವಜಾರೋಹಣವನ್ನು ನೆರವೇರಿಸಿದ ಬಳಿಕ ಎಸ್.ಡಿ.ಎಮ್.ಸಿ. ಅಧ್ಯಕ್ಷರು ನೆರೆದಿರುವ ಸರ್ವರಿಗೂ 75ನೇ ಸ್ವಾತಂತ್ರ್ಯೋತ್ಸವದ ಶುಭಕೋರಿದರು. ನಂತರ ಶಾಲಾ ಮುಖ್ಯಶಿಕ್ಷಕರಾದ ಶ್ರೀ ದರ್ಶನ ಹರಿಕಾಂತರವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ನಮನ ಸಲ್ಲಿಸುತ್ತ, ಪ್ರಜ್ಞಾವಂತ ನಾಗರಿಕರಾಗಿ ದೇಶದ ಅಭ್ಯುದಯಕ್ಕೆ ಶ್ರಮಿಸಬೇಕು ಎಂದರು. ಅದೇ ರೀತಿಯಾಗಿ ಎಸ್.ಡಿ.ಎಮ್.ಸಿ. ಸದಸ್ಯರಾದ ಶ್ರೀ ವೆಂಕಟೇಶ ಭಟ್ ಇವರು ನಮ್ಮಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಹೆಚ್ಚಲಿ ಎಂದು ನುಡಿದರು. ಹಾಗೇ ಗ್ರಾಮ ಪಂಚಾಯತ ಸದಸ್ಯರಾದ ಶ್ರೀಮತಿ ರಾಧಾ ವೆಂಕಟ್ರಮಣ ಗೌಡ ಇವರು ಸರ್ವರಿಗೂ ಸ್ವಾತಂತ್ರ್ಯೊತ್ಸವದ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ.ಯ ಸದಸ್ಯರುಗಳು, ಗ್ರಾಮ ಪಂಚಾಯತ ಸದಸ್ಯರು, ಪಾಲಕ-ಪೋಷಕರು, ಶಾಲಾ ಶಿಕ್ಷಕರು, ಬಿಸಿಯೂಟದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಊರ ನಾಗರಿಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.