ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ 2025-26
ಸಿದ್ದಾಪುರ ಹಾಳದಕಟ್ಟಾ ಪ್ರೌಢಶಾಲೆಯಲ್ಲಿ ನಡೆದ 2025-26ನೇ ಸಾಲಿನ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹುಲ್ಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ತೇಜಸ್ವಿ ರಾಮಚಂದ್ರ ಹೆಗಡೆ ಹಿರಿಯ ವಿಭಾಗದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಕಳೆದ ವರ್ಷವೂ ತೇಜಸ್ವಿ ಜಿಲ್ಲಾ ಮಟ್ಟದ ಆಶುಭಾಷಣದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ತೇಜಸ್ವಿಯ ಈ ಸಾಧನೆಗೆ ಶಾಲೆಯ ಶಿಕ್ಷಕರು ಎಸ್.ಡಿ.ಎಮ್.ಸಿ. ಸಮಿತಿ, ಪಾಲಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

* * * * * * *
